ಕ್ರಿಕೆಟ್ ಬೆಟ್ಟಿಂಗ್: ಯುವಕ ಸೆರೆ, 1.89 ಲಕ್ಷ ನಗದು ಜಪ್ತಿ

Update: 2019-04-01 18:10 GMT

ಬೆಂಗಳೂರು, ಎ.1: ಹೆಗ್ಗನಹಳ್ಳಿಯ ಕಪಿಲಾ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ, 1 ಲಕ್ಷ 89 ಸಾವಿರ ರೂ. ನಗದು, ಎರಡು ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ಕಪಿಲಾ ನಗರದ ವಿಶ್ವನಾಥ್ ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.

ಆರೋಪಿಯು ಟಿ-20 ಕ್ರಿಕೆಟ್ ಪಂದ್ಯಕ್ಕೆ ಮೊಬೈಲ್ ಮೂಲಕ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದನು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈತನ ಜೊತೆಗೆ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ನಿತಿನ್ ಎಂಬಾತ ಪರಾರಿಯಾಗಿದ್ದಾನೆ. ಈ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News