×
Ad

ಎ.5ರಂದು ಬಾಬು ಜಗಜೀವನಾರಾಂ ಜನ್ಮದಿನೋತ್ಸವ

Update: 2019-04-02 21:01 IST

ಉಡುಪಿ, ಎ.2: ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಸಂಯುಕ್ತ ಆಶ್ರಯ ದಲ್ಲಿ ಎ.5ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕೋರ್ಟ್ ಹಾಲ್‌ನಲ್ಲಿ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನಾರಾಂ ಅವರ 112ನೇ ಜನ್ಮ ದಿನೋತ್ಸವ ಆಚರಣೆ ನಡೆಯಲಿದೆ.

ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News