×
Ad

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಶೋಭಾ, ರಘುಪತಿ ಭಟ್ ಸಹಿತ ಮೂವರ ವಿರುದ್ಧ ಪ್ರಕರಣ

Update: 2019-04-02 22:11 IST

ಬ್ರಹ್ಮಾವರ, ಎ.2: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಉಡುಪಿ ಜಿಪಂ ಸದಸ್ಯ ಮಾರಾಳಿ ಪ್ರತಾಪ್ ಹೆಗ್ಡೆ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರು ಮಾ.30ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರೂರು, ಕೆಂಜೂರು, ನೀಲಾವರ, ಉಪ್ಪೂರು ಹಾಗೂ ಹಾವಂಜೆ ಗ್ರಾಮಗಳಲ್ಲಿ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ, ರಾಜಕೀಯ ಪ್ರಚಾರ ಕಾರ್ಯಕ್ರಮದಲ್ಲಿ ಧ್ವನಿವರ್ಧಕವನ್ನು ಬಳಸಿ ಚುನಾವಣೆ ಸಭೆ ನಡೆಸಿ, ಮತದಾರರ ಮೇಲೆ ಪ್ರಭಾವ ಬೀರಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಚುನಾವಣಾ ಅಧಿಕಾರಿ ಮಹೇಶ್ ಕೆ.ಜಿ. ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News