ಕೊಡಗಿನಲ್ಲಿ ಗುಡುಗು, ಸಿಡಿಲು ಸಹಿತ ಮಳೆ

Update: 2019-04-02 16:53 GMT

ಮಡಿಕೇರಿ,ಎ.2: ಬಿಸಿಲ ಬೇಗೆಯಿಂದ ಬೇಸತ್ತಿದ್ದ ಕೊಡಗು ಇಂದು ಸುರಿದ ಮಳೆಗೆ ಕೊಂಚ ತಣ್ಣಗಾಗಿದೆ. ಮಧ್ಯಾಹ್ನದ ನಂತರ ಮಡಿಕೇರಿ ತಾಲೂಕು ಸೇರಿದಂತೆ ಜಿಲ್ಲೆಯ ಅನೇಕ ಕಡೆ ಗುಡುಗು, ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರು ಹರ್ಷಗೊಂಡಿದ್ದಾರೆ.

ನಿರಂತರ ಬಿಸಿಲಿನಿಂದ ನದಿಗಳಲ್ಲಿ ನೀರಿನ ಮಟ್ಟ ಕುಸಿದು ತೋಟಗಳಿಗೆ ಸಿಂಪಡಿಸಲು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಜಿಲ್ಲೆಯಲ್ಲಿದೆ. ಇಂದು ಮಡಿಕೇರಿ ನಗರ, ಗ್ರಾಮೀಣ ಪ್ರದೇಶ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗಿದೆ. ಸೋಮವಾರಪೇಟೆಯಲ್ಲಿ ಆಲಿಕಲ್ಲು ಮಳೆಯಾದ ಬಗ್ಗೆ ವರದಿಯಾಗಿದೆ. 

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಗೆ ಉತ್ತಮ ಮಳೆಯಾಗಿಲ್ಲ. ಮಳೆಯ ಪ್ರಮಾಣ ಕಡಿಮೆಯೇ ಇದ್ದು ಮತ್ತಷ್ಟು ಮಳೆಯಾಗಬೇಕೆಂದು ಬೆಳೆಗಾರರು ಬಯಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News