×
Ad

ಎ.6: ನರೇಂದ್ರ ಪ.ಪೂ. ಕಾಲೇಜ್ ನೂತನ ಕಟ್ಟಡ ಉದ್ಘಾಟನೆ

Update: 2019-04-03 17:45 IST

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 57ನೇ ಶಿಕ್ಷಣ ಸಂಸ್ಥೆಯಾಗಿ 2017ರಲ್ಲಿ  ಲೋಕಾರ್ಪಣೆಗೊಂಡ ನರೇಂದ್ರ ಪದವಿ ಪೂರ್ವ ಕಾಲೇಜ್‍ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಎ.6ರಂದು ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಯಂ.ಕೃಷ್ಣ ಭಟ್ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 10 ಕೋಟಿ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣಗೊಳ್ಳಲಿದ್ದು, ಈ ಪೈಕಿ ನೆಲ ಅಂತಸ್ತು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಮಾಡಲಾಗಿದೆ. ನೂತನ ಕಟ್ಟಡವನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಎನ್. ವಿನಯ ಹೆಗ್ಡೆ ನೆರವೇರಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಕಾಲೇಜ್‍ನ ಹಿರಿಯ ವಿದ್ಯಾರ್ಥಿಯಾಗಿದ್ದು, ಬಿಟ್ಸ್ ಪಿಲಾನಿ ಸಂಸ್ಥೆಯ ನಿರ್ದೇಶಕ ಪ್ರೊ. ರಘುರಾಮ ಬಿ, ಪ್ರೊ ಕಬಡ್ಡಿ ಆಟಗಾರರಾದ ಸುಕೇಶ್ ಹೆಗ್ಡೆ ಮತ್ತು ಪ್ರಶಾಂತ್ ಕುಮಾರ್ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲಿ ಕಾಲೇಜ್‍ನ ಆಡಳಿತ ಮಂಡಳಿ ಅಧ್ಯಕ್ಷೆ ರೂಪಲೇಖಾ, ಸಂಚಾಲಕ ಡಿ. ವಿಜಯಕೃಷ್ಣ ಭಟ್, ಸದಸ್ಯ ಚಂದ್ರಶೇಖರ ನಾಯ್ಕ್, ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News