ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

Update: 2019-04-03 13:19 GMT

ಮಂಗಳೂರು, ಎ.3: ದ.ಕ. ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಚಿಸುವ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ತೇರ್ಗಡೆ ಹೊಂದಿದ  ಆಸಕ್ತ ಯುವಕ/ ಯುವತಿಯರು ತಮ್ಮ ಸ್ವ ವಿವರಗಳೊಂದಿಗೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇಲ್ಲಿಗೆ ಎ.12ರಂದು ಸಂಜೆ 5 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನದ ಕ್ಷೇತ್ರ ಸಂಪರ್ಕಾಧಿಕಾರಿ ಸುನೀಲ್ ಕುಮಾರ್ ಎನ್. (9110809886) ಹಾಗೂ ಯುವ ಸಮಾಲೋಚಕಿ ಪ್ರೇಮಾ (9008353793) ಅವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News