×
Ad

ಹಿರಿಯಡಕ: ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

Update: 2019-04-03 19:48 IST

ಉಡುಪಿ, ಎ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಮಾಹಿತಿ ಘಟಕ, ಐಕ್ಯುಎಸಿ ಮತ್ತು ತ್ರಿಶಾ ಕ್ಲಾಸಸ್ ಉಡುಪಿ ಇವರ ಸಹಯೋಗದೊಂದಿಗೆ ಅಂತಿಮ ವರ್ಷದ ಬಿಕಾಂ, ಬಿಎ ವಿದ್ಯಾರ್ಥಿಗಳಿಗೆ ಪ್ರೀಪೇರಿಂಗ್ ಪಾರ್ ಕಾರ್ಪೊರೇಟ್ ಜಾಬ್ಸ್ ಎಂಬ ಕಾರ್ಯಾಗಾರವನ್ನು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತ್ರಿಶಾ ಕ್ಲಾಸಸ್ ಮಂಗಳೂರು ವಿಭಾಗದ ಮುಖ್ಯಸ್ಥ ಪ್ರೊ. ಚಂದನ್ ರಾವ್, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸು ವುದರೊಂದಿಗೆ ಕಾರ್ಪೋರೇಟ್ ವಲಯದಲ್ಲಿ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳನ್ನು, ಜ್ಞಾನವನ್ನು ಹೇಗೆ ಪಡೆಯಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಸಮೂಹ ಚರ್ಚೆ, ಅಣಕು ಸಂದರ್ಶನ ವನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ದಿನೇಶ್ ಎಂ. ಪ್ರಾಸ್ತಾವಿಕ ಮಾತುಗಳನಾಡಿದರು.

ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ನಿರ್ದೇಶಕ ರಂಜಿತ್ ಪ್ರಭು, ಮಣಿಪಾಲ ಜೂನಿಯರ್ ಕಾಲೇಜಿನ ಉಪನ್ಯಾಸಕ ಪ್ರಬಾಕರ್ ಭಂಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಂಚಾಲಕಿ ಪ್ರೊ. ಸುಜಯಾ ಕೆ.ಎಸ್., ವಿದ್ಯಾರ್ಥಿ ಸಂಚಾಲಕ ಮನಮೋಹನ್ ಮುಂತಾದವರು ಉಪಸ್ಥಿತರಿದ್ದರು.
ಕಾಂಚನಾ ಸ್ವಾಗತಿಸಿ, ವಿದ್ಯಾರ್ಥಿ ಸಂಚಾಲಕಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮಾಹಿತಿ ಕೋಶ, ಸ್ನಾತಕೋತ್ತರ ವಿಭಾಗದ ಸಂಚಾಲಕ ಪ್ರೊ.ಆನಂದ ಎಂ.ಬಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News