ಜಮ್ಮು ಕಾಶ್ಮೀರ: ಮೆಹಬೂಬ ಮುಫ್ತಿ, ಮಸೂದಿ ನಾಮಪತ್ರ ಸಲ್ಲಿಕೆ

Update: 2019-04-03 15:10 GMT

ಶ್ರೀನಗರ, ಎ.3: ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ನ್ಯಾ. (ನಿವೃತ್ತ) ಹಸ್ನೈನ್ ಮಸೂದಿ ಬುಧವಾರ ಜಮ್ಮು ಕಾಶ್ಮೀರದ ಅನಂತ್‌ನಾಗ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದರು.

ಈ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿ ಮುಹಮ್ಮದ್ ಯೂಸುಫ್ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗುಲಾಂ ನಬಿ ಆಝಾದ್‌ರನ್ನು ಕಣಕ್ಕೆ ಇಳಿಸಲಾಗಿದೆ. ಎಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ಎಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿರುತ್ತದೆ. ದಕ್ಷಿಣ ಕಾಶ್ಮೀರದ ನಾಲ್ಕು ಜಿಲ್ಲೆಗಳಲ್ಲಿ ವ್ಯಾಪಿಸಿರುವ ಈ ಕ್ಷೇತ್ರದಲ್ಲಿ ಎಪ್ರಿಲ್ 23ರಂದು ಅನಂತನಾಗ್ ಜಿಲ್ಲೆ, ಎಪ್ರಿಲ್ 29ರಂದು ಕುಲ್ಗಾಂವ್ ಜಿಲ್ಲೆ, ಮೇ ರಂದು ಪುಲ್ವಾಮಾ ಮತ್ತು ಶೋಫಿಯಾನ್ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News