ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

Update: 2019-04-03 15:19 GMT

ಮಂಗಳೂರು, ಎ.3: ನಗರದ ರಾವ್ ಆ್ಯಂಡ್ ರಾವ್ ವೃತ್ತದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಅಝರುದ್ದೀನ್ (28) ಬಂಧಿತ ಆರೋಪಿ. ಈತನಿಂದ 9,000 ರೂ. ಮೌಲ್ಯದ 498 ಗ್ರಾಂ ಗಾಂಜಾ, 500 ರೂ. ಮೌಲ್ಯದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್, ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ ವಿಭಾಗದ ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News