ಲೋಕಸಭೆ ಚುನಾವಣೆ ಹಿನ್ನೆಲೆ: 48.28 ಕೋಟಿ ರೂ. ಮೌಲ್ಯದ ನಗದು, ಮದ್ಯ ವಶ

Update: 2019-04-03 15:24 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.3: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ತನಿಖಾ ತಂಡಗಳು ಕಾರ್ಯಾಚರಣೆ ನಡೆಸಿ 48.24 ಕೋಟಿ ಮೌಲ್ಯದ ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಟಾಟಿಕ್ ಸರ್ವೆಲೆನ್ಸ್ ಸ್ಕ್ವಾಡ್‌ಗಳು ಹಾಗೂ ಪೊಲೀಸ್ ಪ್ರಾಧಿಕಾರಗಳು 7,89,12,505 ನಗದು, 36,48,843 ರೂ. ಮೌಲ್ಯದ ಮದ್ಯ ಹಾಗೂ 6.16 ಲಕ್ಷ ಮೌಲ್ಯದ ಮಾದಕ ದ್ರವ್ಯ ಮತ್ತು 1,65,34,529 ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಸುಮಾರು 1,128 ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದಾಯ ತೆರಿಗೆ ಇಲಾಖೆಯು 4.99 ಲಕ್ಷ ನಗದು, 1.68 ಮೌಲ್ಯದ ಮತ್ತಿತರೆ ವಸ್ತುಗಳು ವಶಪಡಿಸಿಕೊಂಡಿದೆ. ಅಬಕಾರಿ ಇಲಾಖೆಯು 31.55 ಲಕ್ಷ ಮೌಲ್ಯದ ಮದ್ಯ, 4.25 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಂಡು, 2259 ಮದ್ಯದ ಪರವಾನಿಗೆ ಉಲ್ಲಂಘಿಸಿದ ಪ್ರಕರಣಗಳು, 5 ಎನ್‌ಡಿಪಿಎಸ್ ಮತ್ತು ಅಬಕಾರಿ ಕಾಯ್ದೆ ಅನ್ವಯ 6701 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News