×
Ad

ಉಡುಪಿ: ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ

Update: 2019-04-03 21:34 IST

ಉಡುಪಿ, ಎ.3: ಉಡುಪಿಯ ಸಮಾಜ ಸೇವಕ ಮತ್ತು ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉಡುಪಿ ಕಿನ್ನಿಮುಲ್ಕಿಯ ಕೃಷ್ಣಮೂರ್ತಿ ಆಚಾರ್ಯ ಇವರನ್ನು ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರ ಸವಿುತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇವರ ನೇಮಕಾತಿ ಆದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ಎಂ.ಎ.ಗಫೂರ್, ದಿವಾಕರ್ ಕುಂದರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಾಸುದೇವ ಯಡಿಯಾಳ್, ಸತೀಶ್ ಅಮೀನ್ ಪಡುಕೆರೆ, ಬಿ.ನರಸಿಂಹ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News