​ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡಿಯೇ ಸಿದ್ಧ: ಎಂ.ಬಿ.ಪಾಟೀಲ್

Update: 2019-04-04 13:12 GMT

ವಿಜಯಪುರ, ಎ.4: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದೇವೆ. ಹಾಗೂ ದೇಶಾದ್ಯಂತ ಬಿಜೆಪಿಯೇತರ ಪಕ್ಷಗಳು ಭರ್ಜರಿ ಜಯಭೇರಿ ಭಾರಿಸುವ ಮೂಲಕ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡಿಯೇ ತೀರುತ್ತೇವೆಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕಪ್ಪುಹಣ, ಉದ್ಯೋಗ ಸೃಷ್ಟಿ ಭರವಸೆ ಇನ್ನೂ ಈಡೇರಿಸಿಲ್ಲ. ಅಚ್ಛೇದಿನ್ ಯುವಕರಿಗೆ ಬಂದೇ ಇಲ್ಲ, ರೈತರಿಗೆ, ವ್ಯಾಪಾರಿಗಳಿಗೆ, ಜನಸಾಮಾನ್ಯರಿಗೂ ಬಂದಿಲ್ಲವೆಂದರು.

ಕೇಂದ್ರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವರಾಗಿದ್ದ ರಮೇಶ ಜಿಗಜಿಣಗಿ ತಮ್ಮ ಸ್ವಂತ ತಾಲೂಕು ಇಂಡಿಗೆ ಕುಡಿಯುವ ನೀರು ಕೊಟ್ಟಿಲ್ಲ. ಸಂಸತ್ತಿನಲ್ಲಿ ಕ್ಷೇತ್ರದ ಜನರ ಪರವಾಗಿ ಒಂದು ಪ್ರಶ್ನೆಯನ್ನೂ ಕೇಳಿಲ್ಲ. ಇಂತವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾದರೆ ಜನತೆಗೆ ಏನು ಪ್ರಯೋಜನವೆಂದು ಅವರು ಪ್ರಶ್ನಿಸಿದರು.

ಕಳೆದ ಬಾರಿಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನತೆಗಾಗಿ ಹಲವಾರು ಉತ್ತಮ ಯೋಜನೆಗಳನ್ನು ಜಾರಿ ಮಾಡಿತ್ತು. ಅದೇ ಮಾದರಿಯಲ್ಲಿ ಮುಂದುವರೆದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರದಲ್ಲೂ ಉತ್ತಮ ಕಾರ್ಯಗಳಾಗುತ್ತಿವೆ. ಹೀಗಾಗಿ ಜನತೆಯಲ್ಲಿ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News