5.2 ಪ್ರಮಾಣದ ಭೂಕಂಪಕ್ಕೆ ಈಶಾನ್ಯ ತತ್ತರ

Update: 2019-04-04 15:29 GMT

ಶಿಲ್ಲಾಂಗ್,ಎ.4: ರಿಕ್ಟರ್ ಮಾಪಕದಲ್ಲಿ 5.2ರಷ್ಟಿದ್ದ ಭೂಕಂಪ ಭಾರತದ ಈಶಾನ್ಯ ರಾಜ್ಯಗಳಲ್ಲಿ ಗುರುವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ 1.15ರ ಹೊತ್ತಿಗೆ ಸಂಭವಿಸಿದ ಭೂಕಂಪದ ಕೇಂದ್ರ ಮಣಿಪುರದ ಸೆನಪತಿ ಜಿಲ್ಲೆಯಲ್ಲಿತ್ತು.

ಸದ್ಯ ಭೂಕಂಪದಿಂದ ಯಾವುದೇ ಸಾವುನೋವುಗಳು ಸಂಭವಿಸಿರುವ ಬಗ್ಗೆ ಮಾಹಿತಿಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳ ಜನರು ಭೂಮಿ ನಡುಗುವ ಅನುಭವಕ್ಕೊಳಗಾದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪಶಾಸ್ತ್ರಜ್ಞರ ಪ್ರಕಾರ, ಭಾರತದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿರೆರಾಂ, ತ್ರಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಣಿಪುರ ಜಗತ್ತಿನ ಆರನೇ ಮುಖ್ಯ ಭೂಕಂಪ ರೇಖೆಯಡಿ ಬರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News