ವಿಪತ್ತು ಸಂದರ್ಭದಲ್ಲಿ ಅಗ್ನಿಶಾಮಕ ಅಧಿಕಾರಿ ಸಿಬ್ಬಂದಿ ಕಾರ್ಯ ಪ್ರಶಂಸನೀಯ: ಟಿ.ಎಂ.ವಿಜಯಭಾಸ್ಕರ್

Update: 2019-04-04 16:47 GMT

ಬೆಂಗಳೂರು, ಎ.4: ವಿಪತ್ತುಗಳ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಜೀವಗಳ ರಕ್ಷಣೆ ಮಾಡುತ್ತಾರೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಶಂಸೆ ವ್ಯಕ್ತಪಡಿಸಿದರು.

ಗುರುವಾರ ಬನ್ನೇರುಘಟ್ಟ ರಸ್ತೆಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ವತಿಯಿಂದ ಏರ್ಪಡಿಸಲಾದ ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರವುದಲ್ಲಿ ಭಾಗವಹಿಸಿ ಮಾತನಾಡಿದರು.

51 ಅಗ್ನಿಶಾಮಕ ಠಾಣಾಧಿಕಾರಿ ಪ್ರಶಿಕ್ಷಣಾರ್ಥಿಗಳು ಹಾಗೂ 26 ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳು ಅಕಾಡೆುಯಲ್ಲಿ 8 ತಿಂಗಳ ಒಳಾಂಗಣ ಮತ್ತು ಹೊರಾಂಗಣ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಸೇವಾ ಮನೋಭಾವದಿಂದ ಜನರ ಆಸ್ತಿ, ಪ್ರಾಣ ರಕ್ಷಿಸುವ ಇವರ ಕೆಲಸ ಅಭಿನಂದನಾರ್ಹ. ಕೊಡಗಿನ ಪ್ರಕೃತಿ ವಿಕೋಪದಲ್ಲಿ 92 ಅಗ್ನಿಶಾಮಕ ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದರು.

ಇತ್ತೀಚೆಗೆ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಕಾರುಗಳು ಭಸ್ಮವಾದ ಸಂದರ್ಭದಲ್ಲಿ ಹಲವು ಕಾರುಗಳನ್ನು ರಕ್ಷಿಸಿದ್ದಾರೆ. ಧಾರವಾಡದಲ್ಲಿ ಕಟ್ಟಡ ಕುಸಿತದಿಂದ ಅವಶೇಷದಡಿ ಸಿಲುಕಿದ 55 ಜನರನ್ನು ರಕ್ಷಿಸಿ 15 ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇವರು ಸಾರ್ವಜನಿಕರ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.

ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳು ನಿರ್ಗಮನ ಪಥಸಂಚಲನ ಹಾಗೂ ಗೌರವ ವಂದನೆ ಸಲ್ಲಿಸಿದರು. ತರಬೇತಿ ಸಂದರ್ಭದಲ್ಲಿ ವಿವಿಧ ಸಾಧನೆ ಮಾಡಿದ ಪ್ರಶಿಕ್ಷಣಾಥಿಗರ್ಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಒಳಾಡಳಿತ ಇಲಾಖೆಯು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮಹಾನಿರ್ದೇಶಕ ಎಂ.ಎನ್.ರೆಡ್ಡಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಸುನೀಲ್ ಅಗರ್ವಾಲ್, ಅರಕ್ಷಕ ಉಪ ಮಹಾ ನಿರೀಕ್ಷಕರಾದ ಡಾ. ಬಿ.ಆರ್.ರವಿಕಾಂತೇಗೌಡ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಪತ್ತು ಸಂದರ್ಭದಲ್ಲಿ ನಡೆಸಲಾದ ಕಾರ್ಯಾಚರಣೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನ, ಪತ್ತು ನಿರ್ವಹಣೆ ಸಲಕರಣೆಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷತೆಯನ್ನು ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News