ಆಪರೇಷನ್ ಕಮಲದ ಸಂದರ್ಭ ಚೌಕೀದಾರ ಎಲ್ಲಿದ್ದರು: ಈಶ್ವರ್ ಖಂಡ್ರೆ ಪ್ರಶ್ನೆ

Update: 2019-04-05 16:22 GMT

ಬೀದರ್, ಎ.5: ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸುತ್ತಿದ್ದ ವೇಳೆ ಚೌಕೀದಾರರು ಎಲ್ಲಿ ಅಡಗಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶ್ನೆ ಮಾಡಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಆಪರೇಷನ್ ಕಮಲ ಒಂದು ಶಾಪ. ಆದರೆ, ರಾಜ್ಯದಲ್ಲಿ ಬಿಜೆಪಿ 22 ಲೋಕಸಭಾ ಸ್ಥಾನ ಗೆದ್ದರೆ ಸಮ್ಮಿಶ್ರ ಸರಕಾರ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಪ್ರತಿಪಕ್ಷದಲ್ಲಿ ಇದ್ದುಕೊಂಡು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕಿದ್ದ ಬಿಜೆಪಿ ಅವರು ಎಲ್ಲರಿಗೂ ಅವಮಾನವಾಗುವ ರೀತಿಯಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಅದಕ್ಕೆ ಕೋಟ್ಯಂತರ ಹಣ ವ್ಯಯಿಸಿದ್ದಾರೆ. ಆಗ ಚೌಕೀದಾರ್ ಎಲ್ಲಿದ್ದರು? ಜನರು ರಾಜಕಾರಣಿಗಳನ್ನು ಸಂಶಯದ ದೃಷ್ಟಿಯಿಂದ ನೋಡುವಂತಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News