ಕೊಳಚೆಗೇರಿಯಲ್ಲಿ ಬಾಲಕಿಯ ಶವ ಪತ್ತೆ: ಅತ್ಯಾಚಾರದ ಶಂಕೆ

Update: 2019-04-06 10:31 GMT

ಮುಂಬೈ, ಎ.6: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ 9 ವರ್ಷದ ಬಾಲಕಿ ಮುಂಬೈನ ಜುಹು ಪ್ರದೇಶದ ಸ್ಲಂನಲ್ಲಿ ಶವವಾಗಿ ಪತ್ತೆಯಾಗಿದ್ದು, ಬಾಲಕಿಯ ಹತ್ಯೆಗೆ ಮೊದಲು ಅತ್ಯಾಚಾರ ನಡೆಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿದ ಸ್ಥಳೀಯರು ರಸ್ತೆಯನ್ನು ಬಂದ್ ಮಾಡಿ, ಜುಹು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

  ಬಾಲಕಿ 2 ದಿನಗಳ ಹಿಂದೆ ನಾಪತ್ತೆಯಾದಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ? ಎಂದು ಖಚಿತಪಡಿಸಲು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಿಕೊಡಲಾಗಿದೆ. ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News