​ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

Update: 2019-04-07 06:45 GMT

ಮಂಗಳೂರು, ಎ.7: ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ರವಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು.

ಅರಬ್ಬೀ ಸಮುದ್ರದ ಉಪ್ಪು ನೀರನ್ನು ಶುದ್ಧೀಕರಿಸಿ ದಿನದ 24 ಗಂಟೆಯೂ ಜಿಲ್ಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ, ಹೈಕೋರ್ಟ್ ವಿಭಾಗೀಯ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಪ್ರಯತ್ನ, ದ.ಕ. ಜಿಲ್ಲೆಯಲ್ಲಿ ರಾಷ್ಟ್ರೀಯ ಮಟದ್ಟ ಮೀನುಗಾರಿಕಾ ಕೇಂದ್ರ ಸ್ಥಾಪನೆ, ಐಟಿ-ಬಿಟಿ ಮೂಲಕ ಶಾಶ್ವತ ಉದ್ಯೋಗ ಕಲ್ಪಿಸಲು ಪ್ರಯತ್ನ, ಅಹಿಂದ ವರ್ಗಗಳಿಗೆ ಸಾಂವಿಧಾನಿಕವಾಗಿ ನೀಡಿರುವ ಹಕ್ಕುಗಳ ರಕ್ಷಣೆ, ಪುತ್ತೂರು ಸ್ಟೇಷನ್ ತಂಗುವಿಕೆಯ ಲೋಕಲ್ ರೈಲನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಿಸುವುದು ಇತ್ಯಾದಿ ಸಹಿತ 30 ಅಂಶಗಳು ಪ್ರಣಾಳಿಕೆಯಲ್ಲಿ ಸೇರಿವೆ.

ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ರಾಧಾಕೃಷ್ಣ, ಪಕ್ಷದ ಮುಖಂಡರಾದ ಮೆಹರೂಝ್ ಖಾನ್, ಎ.ಸಿ.ವಿನಯರಾಜ್, ಬಿ.ಎ.ಮುಹಮ್ಮದ್ ಹನೀಫ್, ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News