ಮುಖ್ಯಮಂತ್ರಿ ಕುಮಾರಸ್ವಾಮಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ
Update: 2019-04-07 15:30 IST
ಉಡುಪಿ, ಎ.7: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉಡುಪಿಗೆ ಆಗಮಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಧ್ಯಾಹ್ನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಜೊತೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದ ಅವರು, ಬಳಿಕ ಮಠದ ಸುವರ್ಣ ಗೋಪುರ ಯೋಜನೆಯನ್ನು ವಿಕ್ಷೀಸಿದರು.
ನಂತರ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನ ಪರಿಷತ್ ಸದಸ್ಯ ಬೋಜೆಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ವಾಸುದೇವ ರಾವ್ ಮೊದಲಾದವರು ಉಪಸ್ಥಿತರಿದ್ದರು.