ನೀತಿ ಸಂಹಿತೆ ಉಲ್ಲಂಘನೆ: ಮತಯಾಚನೆಗೆ ಬಂದು ಅರ್ಧದಲ್ಲೇ ಹಿಂದಿರುಗಿದ ಚಕ್ರವರ್ತಿ ಸೂಲಿಬೆಲೆ

Update: 2019-04-07 12:02 GMT

ಬೆಂಗಳೂರು ,ಎ.7: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಸೂಲೆಬೆಲೆ ಆಗಮಿಸಿದ್ದರು. ಈ ವೇಳೆ ಅವರು ವಿದ್ಯಾಪೀಠದಲ್ಲಿ ಮತಯಾಚನೆ ಮಾಡಲು ಬಂದಿದ್ದು, ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಚುನಾವಣಾ ವೀಕ್ಷಕರು ದೇವಸ್ಥಾನದ ಪ್ರಾಂಗಣದಲ್ಲಿ ಮತಯಾಚನೆ ಮಾಡಲು ಅವಕಾಶವಿಲ್ಲ. ಕೇವಲ ಕೈ ಮುಗಿದು ನಡೆಯಬಹುದು ಎಂದು ಆಯೋಜಕರಿಗೆ ವಿವರಿಸಿದರು. ಹೀಗಾಗಿ ಭಾಷಣ ಮಾಡಲು ಆಗಮಿಸಿದ್ದ ಚಕ್ರವರ್ತಿ ಸೂಲಿಬೆಲೆ ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟುಕುಗೊಳಿಸಿ ಸ್ಥಳದಿಂದ ತೆರಳಬೇಕಾಯಿತು. 

ಇದಕ್ಕೂ ಮುನ್ನ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದರು. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News