ಲೋಕಸಭಾ ಚುನಾವಣೆ ಹಿನ್ನೆಲೆ: 62.70 ಕೋಟಿ ಮೌಲ್ಯದ ಮದ್ಯ, ನಗದು ವಶ

Update: 2019-04-07 17:39 GMT

ಬೆಂಗಳೂರು, ಎ.7: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತನಿಖಾ ತಂಡಗಳು 62.70 ಕೋಟಿ ಮೌಲ್ಯದ ನಗದು, ಇತರೆ ವಸ್ತುಗಳು, ಮದ್ಯ, ಮಾದಕದ್ರವ್ಯ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.

ರಾಜ್ಯಾದ್ಯಂತ ಸಂಚರಿಸಿರುವ ಒಟ್ಟಾರೆ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಟಾಟಿಕ್ ಸ್ಕ್ವಾಡ್‌ಗಳು ಹಾಗೂ ಪೊಲೀಸ್ ಪ್ರಾಧಿಕಾರಗಳು 13.64 ಕೋಟಿ ಮೌಲ್ಯದ ನಗದು, 39.24 ಲಕ್ಷ ಮೌಲ್ಯದ ಮದ್ಯ, 6.16 ಲಕ್ಷ ಮೌಲ್ಯದ ಮಾದಕ ದ್ರವ್ಯಗಳನ್ನು ಹಾಗೂ 2.10 ಮೌಲ್ಯದ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 1383 ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಯು 32.97 ಕೋಟಿ ಮೌಲ್ಯದ ಮದ್ಯ, 4.40 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದು, 2021 ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿದೆ. ಮದ್ಯದ ಪರವಾನಿಗೆ ಉಲ್ಲಂಘಿಸಿದ 2735 ಪ್ರಕರಣಗಳು, 7 ಎನ್‌ಡಿಪಿಎಸ್ ಮತ್ತು 8110 ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. 1063 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟಾರೆ 95418 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ಧುಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 43309 ಪ್ರಕರಣಗಳು ದಾಖಲಿಸಲಾಗಿದೆ. 44387 ವ್ಯಕ್ತಿಗಳಿಂದ ಮುಚ್ಚಳಿಕೆ ಪಡೆದಿದ್ದು, 36214 ಜಾಮೀನು ರಹಿತ ವಾರೆಂಟ್‌ಗಳನ್ನು ಚುನಾವಣೆ ನೀತಿ ಸಂಹಿತೆ ಘೋಷಣೆಯಾದಾಗಿನಿಂದ ಇದುವರೆಗೂ ಜಾರಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News