ಕ್ರಿಕೆಟ್ ಬೆಟ್ಟಿಂಗ್: ವ್ಯಕ್ತಿಯ ಬಂಧನ, 6 ಲಕ್ಷ ನಗದು ವಶ

Update: 2019-04-07 18:11 GMT

ಬೆಂಗಳೂರು, ಎ.7: ಐಪಿಎಲ್ ಟಿ-20 ಪಂದ್ಯಾವಳಿಗೆ ಸಂಬಂಧಪಟ್ಟಂತೆ ಸೋಲು-ಗೆಲುವಿನ ಬಗ್ಗೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ, 6 ಲಕ್ಷ ನಗದು, 2 ಮೊಬೈಲ್ ಜಪ್ತಿ ಮಾಡಿದ್ದಾರೆ.

ಕಿತಕನೂರು ಗ್ರಾಮದ ಚೌಡೇಗೌಡ (38) ಬಂಧಿತ ವ್ಯಕ್ತಿ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಕೆ.ಆರ್.ಪುರ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆಯ ಹೊಟೇಲ್ವೊಂದರ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ಎ.4ರಂದು ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಮೊಬೈಲ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಚೌಡೇಗೌಡ ಹಾಗೂ ಕೃಷ್ಣಪ್ಪ ಎಂಬ ಬುಕ್ಕಿಯೊಂದಿಗೆ ಸೇರಿಕೊಂಡು ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟಂತೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿರುವುದು ತಿಳಿದುಬಂದಿದ್ದು, ತಲೆ ಮರೆಸಿಕೊಂಡಿರುವ ಬುಕ್ಕಿಯ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News