×
Ad

ಮತಗಟ್ಟೆಗಳ ವ್ಯವಸ್ಥೆ ಮೇಲ್ವಿಚಾರಣೆಗೆ ನೋಡೆಲ್ ಅಧಿಕಾರಿಗಳ ನೇಮಕ: ಉಡುಪಿ ಡಿಸಿ

Update: 2019-04-08 18:26 IST

ಉಡುಪಿ, ಎ.8: ಎ.18ರಂದು ನಡೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ವೇಳೆ ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸರಬರಾಜು ಮಾಡುವ ಊಟ ಉಪಹಾರದ ಬಗ್ಗೆ ಮೇಲ್ವಿಚಾರಣೆ ನಡೆಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾ ಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಸಕಾಲದಲ್ಲಿ ಊಟ ಉಪಹಾರ ಸರಬರಾಜು ಮಾಡಲು ಮತ್ತು ಉತ್ತಮ ಗುಣಮಟ್ಟದ ಆಹಾರ ಸರಬರಾಜು ಆಗಿರುವುದರ ಕುರಿತು ಪರಿಶೀಲಿಸಲು ಹಾಗೂ ಎಲ್ಲಾ ಮತಗಟ್ಟೆಗಳಿಗೆ ಸಕಾಲದಲ್ಲಿ ಸರಬರಾಜು ಆಗಿರುವುದರ ಬಗ್ಗೆ ಪರಿಶೀಲನೆ ಮತ್ತು ಮೇಲ್ವಿಚಾರಣೆ ನಡೆಸಲು ಶಿಕ್ಷಣ ಇಲಾಖೆಯ ಸಿಆರ್‌ಪಿ ಮತ್ತು ಬಿಆರ್‌ಪಿ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಡಿಸಿ ಹೇಳಿದರು.

ಮಸ್ಟರಿಂಗ್ ಸಮಯದಲ್ಲೇ ಸಿಬ್ಬಂದಿಗಳಿಗೆ ಕುಡಿಯುವ ನೀರಿನ ಕ್ಯಾನ್‌ಗಳು, ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿ, ಮತಗಟ್ಟೆಗಳಲ್ಲಿ ಅಗತ್ಯ ನೀರಿನ ವ್ಯವಸ್ಥೆ ಮತ್ತು ವಿದ್ಯುತ್ ವ್ಯವಸ್ಥೆ ಕುರಿತಂತೆ ಸಂಬಂಪಟ್ಟ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು 2 ದಿನ ಮುಂಚೆಯೆ ಪರಿಶೀಲಿಸಿ ಸೂಕ್ತ ವ್ಯಸ್ಥೆ ಮಾಡುವಂತೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಸಿಂಧೂ ಬಿ.ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ,ವಿದ್ಯಾಂಗ ಇಲಾಖೆ ಉಪನಿರ್ದೇಶಕ ಶೇಷಶಯನ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News