ರಾಮನನ್ನು ಕರೆದುಕೊಂಡು ಮೋದಿ ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ: ಸಿದ್ದರಾಮಯ್ಯ

Update: 2019-04-08 13:52 GMT

ಬೆಂಗಳೂರು, ಎ. 8: ‘ನರೇಂದ್ರ ಮೋದಿಯವರು ತಮ್ಮ ಐದು ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

‘ನರೇಂದ್ರ ಮೋದಿ ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? ಐದು ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?’ ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News