×
Ad

ಉಡುಪಿ: ಕಾಂಗ್ರೆಸ್ ಮುಖಂಡರೊಂದಿಗೆ ಆಸ್ಕರ್ ಸಮಾಲೋಚನೆ

Update: 2019-04-08 20:18 IST

ಉಡುಪಿ, ಎ.8: ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ದೇಶ ಎದುರಿಸುತ್ತಿರುವ ಸಮಸ್ಯೆಗಳ ಜೊತೆಯಲ್ಲಿ ಯುಪಿಎ ಸರಕಾರ ಸೋನಿಯಾ ಗಾಂಧಿ ಮತ್ತು ಡಾ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳನ್ನು ವಿವರಿಸಿ, ರಾಹುಲ್ ಗಾಂಧಿ ಅವರನ್ನು ಭವಿಷ್ಯದ ನಾಯಕರಾಗಿ ಆಯ್ಕೆಯಾಗಲು ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‌ರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ಮತ ವಿಭಜನೆಯಾಗದಂತೆ ತಡೆಯುವುದರ ಜೊತೆಗೆ ಒಗ್ಗಟ್ಟನಿಂದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಆಗ್ರಹಿಸಿದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ. ಮೊಯಿದಿನಬ್ಬ, ಹಸನ್ ಮಣಿಪುರ, ಹಬೀಬ್ ಅಲಿ, ರೋಶನಿ ಒಲಿವರ್, ತಬ್ರೇಜ್ ನಾಗೂರ್, ಮುಷ್ತಾಕ್ ಅಹ್ಮದ್, ರಿಯಾಜ್ ಪಳ್ಳಿ, ಆಬಿದ್ ಅಲಿ, ಇಬ್ರಾಹಿಂ ಮನ್ಹಾರ್, ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಗುಲಾಂ ಆಹಮ್ಮದ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಹರೀಶ್ ಕಿಣಿ, ನ್ಯಾಯವಾದಿ ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಉಪಸ್ಥಿತರಿದ್ದರು.

ಸ್ಟೀವನ್ ಉದ್ಯಾವರ ಸ್ವಾಗತಿಸಿ ಲೋಬೋ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News