ಆಕಸ್ಮಿಕ ಬೆಂಕಿ: ಪೀಠೋಪಕರಣ ಮಳಿಗೆ ಭಸ್ಮ

Update: 2019-04-08 15:24 GMT

ಮಂಡ್ಯ, ಎ.8: ಹಳೆಯ ಪೀಠೋಪಕರಣ ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ.ಬೆಲೆ ಬಾಳುವ ಪಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮದ್ದೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಯಿಂದ ಫರ್ನಿಚರ್ ಸಾಮಗ್ರಿಗಳು ಭಸ್ಮವಾಗಿದ್ದು, ಕಟ್ಟಡದ ಸ್ವಲ್ಪ ಭಾಗ  ಸುಟ್ಟು ಕರಕಲಾಗಿದೆ. ಅಕ್ಕಪಕ್ಕದಲ್ಲಿ ಮನೆಗಳಿದ್ದು ಹೆಚ್ಚಿನ ಅನಾಹುತ ಸಂಭವಿಸಿಲ್ಲ ಹಾಗೂ ಯಾವುದೇ ಸಾವು ನೋವು ಆಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಿಂ ಖಾನ್ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಘಟನೆಯಿಂದ 7 ಲಕ್ಷ ರೂ.ಗೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News