×
Ad

ಉಡುಪಿ ನಗರಸಭೆ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ

Update: 2019-04-08 21:25 IST

ಉಡುಪಿ, ಎ.8: ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ವಾಸ್ತವ್ಯ/ ವಾಣಿಜ್ಯ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲಕರು/ಅನು ಭೋಗದಾರರು ತಮ್ಮ ಕಟ್ಟಡಗಳ 2019-20ನೇ ಸಾಲಿನ ಆಸ್ತಿ ತೆರಿಗೆಯನ್ನು ಎ.1ರಿಂದ 30ರ ಒಳಗೆ ಪಾವತಿಸಿದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಯಂತೆ ಶೇ.5ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಮೇ 1ರಿಂದ ಜೂನ್ 30ರ ತನಕ ಬಡ್ಡಿ ರಹಿತವಾಗಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳ ಬೇಕು. ಜು.1ರ ನಂತರ ಮಾಹೆಯಾನ ಶೇ.2ರಂತೆ ದಂಡನೆಯನ್ನು ವಸೂಲಿ ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News