ಅಮೇಠಿಯಿಂದ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಕೆ

Update: 2019-04-08 17:27 GMT

ಹೊಸದಿಲ್ಲಿ, ಎ. 8: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರಪ್ರದೇಶದ ಅಮೇಥಿ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ವಕ್ತಾರರ ಹೇಳಿಕೆಯನ್ನು ಸುದ್ದಿ ಸಂಸ್ಥೆಯೊಂದು ಉಲ್ಲೇಖಿಸಿ ವರದಿ ಮಾಡಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ನಿಂದ ಎರಡನೇ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರದ ಕುರಿತ ವಿವಾದದ ನಡುವೆ ರಾಹುಲ್ ಗಾಂಧಿ ಚುನಾವಣಾ ಔಪಚಾರಿಕತೆ ಪೂರ್ಣಗೊಳಿಸಲಿದ್ದಾರೆ. ಅದೇ ದಿನ ಅವರು ಅಮೇಠಿಯಲ್ಲಿ ಪ್ರಚಾರ ರ್ಯಾಲಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ನ ಜಿಲ್ಲಾ ಘಟಕದ ವಕ್ತಾರ ಅನಿಲ್ ಸಿಂಗ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರೊಂದಿಗೆ ಅವರ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಇಲ್ಲಿಗೆ ಆಗಮಿಸಲಿದ್ದಾರೆ ಎಂದು ಅಮೇಠಿ ಜಿಲ್ಲಾ ದಂಡಾಧಿಕಾರಿಗೆ ವಿಶೇಷ ರಕ್ಷಣಾ ಗುಂಪು ಬರೆದ ಪತ್ರದಲ್ಲಿ ಹೇಳಳಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News