ಮೆಟ್ರೋ ನಿಲ್ದಾಣಗಳಲ್ಲಿ ಬೈಕ್ ಕಳವು: ನಾಲ್ವರು ಆರೋಪಿಗಳ ಬಂಧನ

Update: 2019-04-08 18:14 GMT

ಬೆಂಗಳೂರು, ಎ.8: ನಗರ ವ್ಯಾಪ್ತಿಯಲ್ಲಿನ ಮೆಟ್ರೋ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು ಇಲ್ಲಿನ ಮಾಗಡಿ ರಸ್ತೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಪ್ರವೀಣ್ ಕುಮಾರ್, ಶರೀಫ್, ಮಹೇಶ್ ಹಾಗೂ ದಿನೇಶ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಗರದ ಪ್ರಮುಖ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲಿಸಿದ್ದ ಬೈಕ್‌ಗಳನ್ನು ಗುರಿಯಾಗಿಸಿಕೊಂಡು, ಕಳವು ಮಾಡಿ ಪರಾರಿಯಾಗುತ್ತಿದ್ದರು. ಈ ಸಂಬಂಧ ಇವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿತ್ತು.

ಬಂಧಿತರಿಂದ ಒಟ್ಟು 50ಕ್ಕೂ ಅಧಿಕ ಬೈಕ್‌ಗಳನ್ನು ಜಪ್ತಿ ಮಾಡಿ, ಇಲ್ಲಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News