ಟಿಕ್ ಟೋಕ್ ನಿಷೇಧ ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

Update: 2019-04-09 06:23 GMT

ಹೊಸದಿಲ್ಲಿ, ಎ. 8: ಅಶ್ಲೀಲ ಅಂಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಟಿಕ್ ಟೋಕ್ ಆ್ಯಪ್ ಡೌನ್ ಲೋಡ್ ನಿಷೇಧಿಸಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮುಂದಿನ ದಿನಗಳಲ್ಲಿ ಈ ಮನವಿಯ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಹೇಳಿದೆ. ಅಶ್ಲೀಲ ಹಾಗೂ ಆಕ್ಷೇಪಾರ್ಹ ಅಂಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮೊಬೈಲ್ ಆ್ಯಪ್ ‘ಟಿಕ್ ಟೋಕ್’ ಅನ್ನು ನಿಷೇಧಿಸುವಂತೆ ಮದ್ರಾಸ್ ಉಚ್ಚ ನ್ಯಾಯಾಲಯ ಎಪ್ರಿಲ್ 3ರಂದು ಕೇಂದ್ರ ಸರಕಾರಕ್ಕೆ ನಿರ್ದೇಶಿಸಿತ್ತು. ಟಿಕ್ ಟಾಕ್ ಸಂಸ್ಕೃತಿಯನ್ನು ಅಪಮೌಲ್ಯೀಕರಣಗೊಳಿಸುತ್ತಿದೆ ಹಾಗೂ ಅಶ್ಲೀಲ ಅಂಶಗಳನ್ನು ಒಳಗೊಂಡಿದೆ. ಆದುದರಿಂದ ಟಿಕ್ ಟೋಕ್ ಆ್ಯಪ್ ಮೇಲೆ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮನವಿ ಕುರಿತು ಮದ್ರಾಸ್ ಹೈಕೋರ್ಟ್ ಮಧ್ಯಂತರ ಆದೇಶ ಜಾರಿ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News