‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

Update: 2019-04-09 17:35 GMT

ಹೊಸದಿಲ್ಲಿ, ಎ. 9: ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ಕಾರ್ಯಕರ್ತ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಈ ವಿವಾದವಲ್ಲದ ವಿಷಯದಿಂದ ನ್ಯಾಯಾಲಯದ ಅತಿ ಹೆಚ್ಚು ಸಮಯ ವ್ಯರ್ಥವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

  ಸಾರ್ವತ್ರಿಕ ಚುನಾವಣೆಗೆ ಕೆಲವು ದಿನಗಳು ಇದ್ದು, ಗುರುವಾರ ಬಿಡುಗಡೆಯಾಗಲಿರುವ ಈ ಚಿತ್ರದ ಬಗ್ಗೆ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇದುವರೆಗೆ ಪ್ರಮಾಣ ಪತ್ರ ನೀಡದೇ ಇರುವುದರಿಂದ ಈ ಮನವಿ ‘ಅಕಾಲಿಕ’. ಆದುದರಿಂದ ನಾವು ಈ ಮನವಿ ವಿಚಾರಣೆಗೆ ಸೂಕ್ತ ಎಂದು ನಾವು ಪರಿಗಣಿಸಲಾರೆವು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಸಂಜೀವ್ ಖನ್ನನ್ ಅವರನ್ನು ಒಳಗೊಂಡ ಪೀಠ ಹೇಳಿದೆ.

  ಎಲ್ಲರಿಗೂ ಸಮಾನ ಅವಕಾಶ ಇದೆ ಎಂಬ ಗ್ರಹಿಕೆಗೆ ಈ ಚಿತ್ರ ಅಡ್ಡಿ ಉಂಟು ಮಾಡುತ್ತದೆ, ಬಿಜೆಪಿಯ ನಾಲ್ವರು ಪದಾಧಿಕಾರಿಗಳು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎಂದು ಕಾಂಗ್ರೆಸ್‌ನ ವಕ್ತಾರ ಅಮನ್ ಪವಾರ್ ಅವರ ವಕೀಲ ಅಭಿಷೇಕ್ ಸಿಘ್ವಿ ಹೇಳಿದರು.

ಚುನಾವಣೆಗೆ ಕೆಲವೇ ದಿನಗಳು ಇರುವಾಗ ಚಿತ್ರ ಬಿಡುಗಡೆಯಾಗುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News