ದೇಶದ ಜನರಿಗೆ ಎರಡನೇ ಟೋಪಿ ಹಾಕಲು ಪ್ರಧಾನಿ ಮೋದಿ ಮುಂದಾಗಿದ್ದಾರೆ: ಐವನ್ ಡಿಸೋಜ

Update: 2019-04-09 10:56 GMT

ಮೈಸೂರು: ದೇಶದ ಜನರಿಗೆ ಎರಡನೇ ಟೋಪಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದು ಇದು ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಮ್ಮೆ ಚಾಯ್ ವಾಲ ಎಂದು ಹೇಳಿಕೊಂಡು ದೇಶದ ಜನರಿಗೆ ಟೋಪಿ ಹಾಕಿದ್ದಾರೆ. ಈಗ ಚೌಕೀದಾರ್ ಎಂದು ಹೇಳಿಕೊಂಡು ಮತ್ತೊಂದು ಟೋಪಿ ಹಾಕಲು ಮುಂದಾಗಿದ್ದಾರೆ. ಆದರೆ  ಈ ಸಾರಿ ಅವರ ಆಟ ನಡೆಯುವು ದಿಲ್ಲ ಎಂದು ಹೇಳಿದರು.

ಅಲ್ಪಸಂಖ್ಯಾತರ ಹಿತವನ್ನು ಕಾಂಗ್ರೆಸ್ ಪಕ್ಷ ಕಾಪಾಡಿದೆ. ಈ ಚುನಾವಣೆಯಲ್ಲಿ ಬೇರೆ ಬೇರೆ ಕಾರಣಕ್ಕೆ ಟಿಕೆಟ್ ನೀಡದೆ ಇರಬಹುದು. ಆದರೆ ಅಲ್ಪಸಂಖ್ಯಾತರ ಬಗ್ಗೆ ಕಾಂಗ್ರೆಸ್ ಹೆಚ್ಚು ಕಾಳಜಿಯನ್ನು ಹೊಂದಿದೆ ಎಂದರು.

ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಾಚಾರ್ ವರದಿಯನ್ನು ಜಾರಿ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News