ಎ.13ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ
Update: 2019-04-09 20:17 IST
ಬೆಂಗಳೂರು, ಎ. 9: ಪ್ರಧಾನಿ ಮೋದಿ ಎಪ್ರಿಲ್ 13ರಂದು ಮಂಗಳೂರು ಮತ್ತು ಬೆಂಗಳೂರು ಹಾಗೂ ಎಪ್ರಿಲ್ 18ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಭೇಟಿ ನೀಡಲಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು, ಬೆಂಗಳೂರು ಹಾಗೂ ಚಿಕ್ಕೋಡಿ, ಕೊಪ್ಪಳ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದು, ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.