×
Ad

ಲೋಕಸಭಾ ಚುನಾವಣೆ: ಎ.18, 23ರಂದು ಸಾರ್ವತ್ರಿಕ ರಜೆ

Update: 2019-04-09 20:35 IST

ಉಡುಪಿ, ಎ.9: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಚುನಾವಣೆ ನಡೆಯುವ ದಿನಗಳಾದ ಎ.18 ಮತ್ತು 23ರಂದು ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸ ಲಾಗಿದೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದರೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವ ವ್ಯವಸ್ಥೆ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News