ಉಡುಪಿ: ಫಿಶ್‌ಮಿಲ್‌ಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕನಿಗೆ ಗಾಯ
Update: 2019-04-09 21:14 IST
ಉಡುಪಿ, ಎ.9: ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕರಾವಳಿ ಬೈಪಾಸ್ ಸಮೀಪದ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ 8.30ರ ಸುಮಾರಿಗೆ ನಡೆದಿದೆ.
ಬ್ರಹ್ಮಾವರದಿಂದ ಉದ್ಯಾವರ ಪಿತ್ರೋಡಿ ಫಿಶ್‌ಮಿಲ್‌ಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಪಲ್ಟಿಯಾಯಿತು. ಲಾರಿಯಲ್ಲಿ ಚಾಲಕನೊಬ್ಬನೆ ಇದ್ದು, ತೀವ್ರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಲಾರಿಯಲ್ಲಿದ್ದ ಕಟ್ಟಿಗೆಗಳು ರಸ್ತೆ ಬಿದಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸಾರ್ವಜನಿಕರು ಕಟ್ಟಿಗೆಗಳನ್ನು ರಸ್ತೆಯಿಂದ ತೆರವುಗೊಳಿಸಿದರು. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ವರೆಗೆ ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.