ಶೋಭಾ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲುವು: ಯಡಿಯೂರಪ್ಪ
ಉಡುಪಿ, ಎ.9: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರವಿವಾರ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮನೆಗೆ ಭೇಟಿ ನೀಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ಜಿಲ್ಲೆಯಲ್ಲಿ ಆಗಿರುವ ಲೋಕಸಭಾ ಚುನಾವಣೆಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಮುಂದಿನ 10 ದಿನಗಳಲ್ಲಿ ಇನ್ನಷ್ಟು ವೇಗ ಕೊಡ ಬೇಕೆಂದು ಪಕ್ಷದ ಪದಾಧಿಕಾರಿಗಳಿಗೆ ಸೂಚಿಸಿದರು. ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾದ ವಿ. ಸುನಿಲ್ ಕುಮಾರ್, ಕೆ.ರಘುಪತಿ ಭಟ್, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಯಶ್‌ಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ, ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಕಿರಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.