×
Ad

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರಮೋದ್ ಮಧ್ವರಾಜ್ ಸಹಿತ ಇಬ್ಬರ ವಿರುದ್ಧ ಪ್ರಕರಣ

Update: 2019-04-09 22:18 IST

ಕಾಪು, ಎ.9: ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಹಿತ ಇಬ್ಬರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಣಗುಡ್ಡೆ ಗ್ರಾಮದ ಅಚ್ಚಡ ಸಮೀಪದ ಎಂ.ಕೆ. ಇಕ್ಬಾಲ್ ಎಂಬವರು ಎ.7ರಂದು ಸಂಜೆ ತನ್ನ ಮನೆಯಲ್ಲಿ ಸಹಾಯಕ ಚುನಾವಣಾಧಿಕಾರಿಯವರ ಪೂರ್ವಾ ನುಮತಿಯನ್ನು ಪಡೆಯದೆ ಜೆಡಿಎಸ್ ಪಕ್ಷದ ಪರ ಚುನಾವಣಾ ಪ್ರಚಾರ ಸಭೆಯನ್ನು ಸಂಘಟಿಸಿದ್ದರು.

ಇದರಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಈ ವೇಳೆ ಪ್ರಮೋದ್ ಮಧ್ವರಾಜ್ ಮನೆಯ ಹೊರಾಂಗಣ ದಲ್ಲಿ ಸಹಾಯಕ ಚುನಾವಣಾಧಿಕಾರಿಯಿಂದ ಅನುಮತಿಯನ್ನು ಪಡೆಯದೆ ಧ್ವನಿವರ್ಧಕ ಬಳಸಿ ಪ್ರಚಾರ ಸಭೆಯನ್ನು ನಡೆಸಿ ಮಾದರಿ ನೀತಿ ಸಂಹಿತೆಯನ್ನು ಉಲಂಘಿಸಿರುವುದಾಗಿ ಫ್ಲೈಯಿಂಗ್ ಸ್ಕ್ವಾಡ್‌ನ ನಾಗರಾಜ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News