ಪಿ. ಎ. ಕಾಲೇಜ್ ಆಫ್ ಫಾರ್ಮಸಿಯಿಂದ ರಕ್ತದಾನ ಶಿಬಿರ

Update: 2019-04-10 08:02 GMT

ಮಂಗಳೂರು, ಎ.10: ರಕ್ತದಾನ ಸೌಹಾರ್ದದ ಸಂಕೇತ. ರಕ್ತದಾನ ಮಾಡುವುದಕ್ಕೆ ಯಾವುದೇ ಜಾತಿ ಮತದ ಭೇದವಿಲ್ಲ ಎಂದು ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲ ಡಾ. ಅಬ್ದುಲ್ ಶರೀಫ್ ಹೇಳಿದ್ದಾರೆ.

ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯ ರಕ್ತನಿಧಿಯ ಆಶ್ರಯದಲ್ಲಿ ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಏರ್ಪಡಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಪಿ.ಎ.ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ.ಕೆ.ಪಿ. ಸೂಫಿ ಮಾತನಾಡಿ, ರಕ್ತದಾನ ಮಹಾದಾನವಾಗಿದೆ ಎಂದರು.

ಯೆನೆಪೊಯ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ.ನಿಶಾ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿ.ಎ.ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್ ಮಾತನಾಡಿ, ಪ್ರಸಕ್ತ ಸಮಾಜದಲ್ಲಿ ರಕ್ತದಾನದ ಅವಶ್ಯಕತೆಯನ್ನು ವಿವರಿಸಿ, ವಿದ್ಯಾರ್ಥಿಗಳು ರಕ್ತದಾನ ಮಾಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಬೇಕೆಂದು ಕರೆ ನೀಡಿದರು.

ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಂಯೋಜಕ ಡಾ.ಮುಹಮ್ಮದ್ ಮುಬೀನ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಇಕ್ಬಾಲ್ ಉಪಸ್ಥಿತರಿದ್ದರು. ಪ್ರೊ. ವಿಜೇತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಬಿರದಲ್ಲಿ ಒಟ್ಟು 91 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News