ತಾಲೂಕು ಮಟ್ಟದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ

Update: 2019-04-10 12:52 GMT

ಕಾರ್ಕಳ : ಬೆದ್ರಲ್ಕೆ ಸ.ಹಿ.ಪ್ರಾ.ಶಾಲೆಯಲ್ಲಿ ತಾಲೂಕು ಮಟ್ಟದ ವಿಶ್ವ ಆರೋಗ್ಯ ದಿನಾಚರಣೆ–ಸಾರ್ವತ್ರಿಕ ಆರೋಗ್ಯ ರಕ್ಷಣೆ ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಕಾರ್ಯಕ್ರಮ ಸೋಮವಾರ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ ಮಾತನಾಡಿ, ಸಮುದಾಯಕ್ಕೆ ಆರೋಗ್ಯ ಕಾರ್ಯಕ್ರಮಗಳು, ಸರಕಾರದಿಂದ ದೊರಕುವ ಆರೋಗ್ಯ ಸೌಲಭ್ಯಗಳ ಮಾಹಿತಿಯ ಅವಶ್ಯಕತೆ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾತನಾಡಿ, ಸಾರ್ವತ್ರಿಕ ಆರೋಗ್ಯ ರಕ್ಷಣೆ, ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ್ ಭಾರತ ಯೋಜನೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಮುಂತಾದ ಯೋಜನೆಗಳ ಬಗ್ಗೆ ವಿವರಿಸಿ, ಫಲಾನುಭವಿಗಳು ಸರಕಾರಿ ವ್ಯವಸ್ಥೆಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗೋಪಾಯಗಳ ಬಗ್ಗೆ ತಿಳಿಸಿದರು.

ದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಕಾಶ್ ಕುಮಾರ್ ಅವರು ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲಿ ದೊರಕುವ ಸೌಲಭ್ಯಗಳು, ಆರೋಗ್ಯ ಸೇವಗಳ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಹಿರಿಯ ಚಿಕಿತ್ಸಾ ಮೇಲ್ಚಿಚಾರಕ ಶಿವಕುಮಾರ್, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್., ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಿಯ ಆರೋಗ್ಯ ಸಹಾಯಕಿ ಮಹಾದೇವಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News