ಶಿವಮೊಗ್ಗ: ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Update: 2019-04-10 14:10 GMT

ಶಿವಮೊಗ್ಗ, ಎ. 9: ನೆರೆಯ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಪ್ರಿಲ್ 18ರಂದು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ನಡೆಯುವ ದಿನಾಂಕಗಳಂದು ಜಿಲ್ಲೆಯ ಗಡಿಭಾಗದ 5ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸನ್ನದುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಗಡಿಭಾಗದಲ್ಲಿರುವ 5ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸನ್ನದುಗಳನ್ನು ಏಪ್ರಿಲ್ 16ರ ಸಂಜೆ 6 ಗಂಟೆಯಿಂದ 18 ರ ಮಧ್ಯರಾತ್ರಿ 12 ಗಂಟೆಯವರೆಗೆ, ಮತದಾನ ಪ್ರಕ್ರಿಯೆ ನಡೆಯುವ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಗಡಿ ಭಾಗದ 5 ಕಿ.ಮೀ. ವ್ಯಾಪ್ತಿಯ ಪ್ರದೇಶಗಳ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕಾ ಘಟಕಗಳನ್ನು, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವ ಸಿಎಲ್-2, ಸಿಎಲ್-4, ಸಿಎಲ್-7, ಸಿಎಲ್-8, ಸಿಎಲ್-9, ಸಿಎಲ್-11(ಸಿ) ಮತ್ತು ಸಿಎಲ್-14 ಹಾಗೂ ವೈನ್ ಟಾವರಿನ್/ವೈನ್ ಬೊಟಿಕ್ ಸನ್ನದುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಹಾಗೂ ಈ ದಿನಗಳಂದು ಸದರಿ ಪ್ರದೇಶದಲ್ಲಿ ಯಾವುದೇ ತರಹದ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮಾಡುವುದನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News