ಮೈತ್ರಿ ಅಭ್ಯರ್ಥಿ ಬೆಂಬಲಿಸಲು ಅಸಹಾಕಾರ: ಸಭೆಯಲ್ಲಿ ಗದ್ದಲ

Update: 2019-04-10 16:52 GMT

ಕೃಷ್ಣರಾಜಪೇಟೆ, ಎ.10: ಪಟ್ಟಣದ ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಕೆ.ರೆಹಮಾನ್ ಖಾನ್ ಅವರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಂಡ್ಯ ಲೋಕಸಭಾ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಬೆಂಬಲಿಸಲು ಕಾಂಗ್ರೆಸ್ ಕಾರ್ಯಕರ್ತರು ಅಸಹಕಾರ ತೋರಿದದರಿಂದ ಗದ್ದಲ ಉಂಟಾಯಿತು.

ಪುರಸಭೆ ಮಾಜಿ ಅಧ್ಯಕ್ಷ ಹೊಸಹೊಳಲು ಕೃಷ್ಣೇಗೌಡ, ಶೀಳನೆರೆ ಗ್ರಾಪಂ ಉಪಾಧ್ಯಕ್ಷ ಪ್ರಕಾಶ್, ಯುವ ಕಾಂಗ್ರೆಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಚೇತನ್ ಕುಮಾರ್, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಡಿ.ಪ್ರೇಮಕುಮಾರ್ ಅವರು ನಾಯಕರ ಮೇಲೆ ಹರಿಹಾಯ್ದು ಗದ್ದಲ ಎಬ್ಬಿಸಿದರು. ಗಲಾಟೆ ನಿಯಂತ್ರಿಸಲು ವಿಫಲರಾಗಿ ಮೂಕ ಪ್ರೇಕ್ಷಕರಂತೆ ನಾಯಕರು ಕುಳಿತರು.

ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆಯುಐಡಿಎಫ್ ಸಿ ಮಾಜಿಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಯೂನಸ್ ಖಾನ್, ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಮುಖಂಡ ಶೀಳನೆರೆ ರಮೇಶ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಮೈತ್ರಿಧರ್ಮದ ವಿರುದ್ಧವಾಗಿ ಕೆಲಸ ಮಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ ಮುಖಂಡರು, ದೇಶದ ಹಿತದೃಷ್ಟಿಯಿಂದ ಮೈತ್ರಿಧರ್ಮ ಪಾಲಿಸಿ ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಹೈಕಮಾಂಡ್ ತೀರ್ಮಾನದಂತೆ ನಿಖಿಲ್ ಬೆಂಬಲಿಸಿ ಗೆಲುವಿಗಾಗಿ ದುಡಿಯುವಂತೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News