×
Ad

ನಿಧನ: ಝುಲೈಕಾಬಿ ಸಂತೆಕಟ್ಟೆ

Update: 2019-04-10 23:09 IST

ಉಡುಪಿ, ಎ.10: ಕಲ್ಯಾಣಪುರ ಸಂತೆಕಟ್ಟೆ ನಿವಾಸಿ ಝುಲೈಕಾಬಿ (79) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಜಮಾಅತೆ ಇಸ್ಲಾಮೀ ಹಿಂದ್ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸದಸ್ಯ ಹಾಗೂ ಸದ್ಭಾವನಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಸೇರಿದಂತೆ ಮೂವರು ಪುತ್ರರು ಹಾಗೂ ಐವರು ಪುತ್ರಿಯರನ್ನು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತಿಮ ಸಂಸ್ಕಾರವು ಕೋಡಿಬೆಂಗ್ರೆ ಜಾಮಿಯಾ ಮಸೀದಿಯ ಖಬರ್ ಸ್ಥಾನದಲ್ಲಿ ಇಂದು ಸಂಜೆ ನೆರವೇರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News