×
Ad

ಎ.17ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಿಲ್ಲ

Update: 2019-04-11 17:29 IST

ಬೆಂಗಳೂರು, ಎ.11: ದ್ವಿತೀಯ ಪಿಯುಸಿ ಫಲಿತಾಂಶ ಎ.17ಕ್ಕೆ ಪ್ರಕಟವಾಗುತ್ತದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಬಂದಿರುವುದು ಸತ್ಯಕ್ಕೆ ದೂರವಾದದ್ದು, ಆ ದಿನ ಫಲಿತಾಂಶ ಪ್ರಕಟವಾಗುವುದಿಲ್ಲವೆಂದು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಸಿ.ಶಿಖಾ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ಯಮಾಪನದ ಬಳಿಕ ಅಂಕಗಳನ್ನು ಆನ್‌ಲೈನ್ ಮೂಲಕ ಸರ್ವರ್‌ಗೆ ಸೇರಿಸುವ ಕ್ರಮದಿಂದಾಗಿ ಫಲಿತಾಂಶವನ್ನು ಬೇಗ ನೀಡಬಹುದಾಗಿದೆ. ಹೀಗಾಗಿ ಫಲಿತಾಂಶ ಪ್ರಕಟನೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಸಾಮಾನ್ಯವಾಗಿ ಸಿಇಟಿ ಫಲಿತಾಂಶ ಬಂದ ಬಳಿಕವೇ ದ್ವಿತೀಯ ಪಿಯು ಫಲಿತಾಂಶ ಪ್ರಟಿಸಲಾಗುತ್ತದೆ. ಪಿಯು ಪರೀಕ್ಷೆ ಫಲಿತಾಂಶದ ಒತ್ತಡ ವಿದ್ಯಾರ್ಥಿಗಳ ಮೇಲೆ ಆಗಬಾರದು ಎಂಬ ಕಾರಣಕ್ಕಾಗಿ ಪರಸ್ಪರ ಹೊಂದಾಣಿಕೆಯ ಮೇಲೆ ಹಲವು ವರ್ಷಗಳಿಂದ ಈ ವಿಧಾನ ಅನುಸರಿಸಿಕೊಂಡು ಬರಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News