ಹಿಂದೂಗಳು, ಬೌದ್ಧರನ್ನು ಹೊರತುಪಡಿಸಿ ಎಲ್ಲ ನುಸುಳುಕೋರರನ್ನು ಹೊರದಬ್ಬುತ್ತೇವೆ: ಅಮಿತ್ ಶಾ

Update: 2019-04-11 15:02 GMT

ಕೋಲ್ಕತ್ತಾ, ಎ. 11: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ಪಶ್ಮಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಬಗ್ಗೆ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಳ್ಳು ಹರಡುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರತಿಯೊಬ್ಬ ನುಸುಳುಕೋರರನ್ನು ಹೊರದಬ್ಬಲು ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಜಾರಿಗೆ ತರುವುದು ನಮ್ಮ ಬದ್ಧತೆ. ಮಮತಾ ಬ್ಯಾನರ್ಜಿ ಅವರಂತೆ ನಾವು ನುಸುಳುಕೋರರನ್ನು ವೋಟ್ ಬ್ಯಾಂಕ್ ಎಂದು ಪರಿಗಣಿಸಲಾರೆವು. ನಮಗೆ ದೇಶದ ಭದ್ರತೆ ಮುಖ್ಯ. ಪ್ರತಿ ಹಿಂದೂ ಹಾಗೂ ಬೌದ್ಧ ನಿರಾಶ್ರಿತರು ಈ ದೇಶದ ಪೌರತ್ವ ಪಡೆಯಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಕಲಂ 370ನ್ನು ರದ್ದುಗೊಳಿಸಲಾಗುವುದು ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ಅನುಷ್ಠಾನಕ್ಕೆ ತರಲಾಗುವುದು ಎಂದು ಅಮಿತ್ ಶಾ ಹೇಳಿದರು.

ಅಲ್ಪಸಂಖ್ಯಾತ ಮತ ಬ್ಯಾಂಕ್ ಸಮಾಧಾನಗೊಳಿಸಲು ತೃಣಮೂಲ ಕಾಂಗ್ರೆಸ್‌ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ವಾಯುದಾಳಿಯನ್ನು ಪ್ರಶ್ನಿಸಿದ್ದಾರೆ ಎಂದು ಶಾ ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News