×
Ad

ಸಚಿವ ಸಿ.ಎಸ್.ಪುಟ್ಟರಾಜು ಪುತ್ರನ ಮನೆ ಮೇಲೆ ಐಟಿ ದಾಳಿ

Update: 2019-04-11 22:05 IST

ಮೈಸೂರು:ಮಂಡ್ಯ ಲೋಕಸಭಾ ಕ್ಷೇತ್ರದ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಪುತ್ರನ ಮನೆ ಮೇಲೆ ಆಧಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಯಾದವಗಿರಿಯಲ್ಲಿನ ಸಂಕಲ್ಪ್ ಅಪಾಟ್೯ಮೆಂಟಿನಲ್ಲಿರುವ ಸಚಿವರ ಪುತ್ರ ಶಿವಕುಮಾರ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿ ತಪಾಸಣೆ ಮಾಡಿದ್ದಾರೆ.

ಶಿವಕುಮಾರ್ ಅವರಾಗಲಿ ಅವರ ಕುಟುಂಬವಾಗಲಿ ಮನೆಯಲ್ಲಿ ಇಲ್ಲದ ವೇಳೆ ಆಧಾಯತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಮನೆಯ ಅಡುಗೆ ಭಟ್ಟರೊಬ್ಬರು ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಮನೆಗೆ ಆಗಮಿಸಿದ ಸಚಿವರ ಪುತ್ರ ಶಿವಕುಮಾರ್ ಐ.ಟಿ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

ಈ ಕುರಿತು  ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, ನಾವು ಯಾರೂ ಇಲ್ಲದ ವೇಳೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಯಾವುದೇ ದಾಖಲೆಗಳು ಸಿಕ್ಕಿಲ್ಲ. ನಾನು ಅವರಿಗೆ ಸಹಕರಿಸುದ್ದೇನೆ. ಎ.25 ರಂದು ಕಚೇರಿಗೆ ಆಗಮಿಸುವಂತೆ ನೋಟಿಸ್ ನೀಡಿ ಹೋಗಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News