ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಸೆರೆ

Update: 2019-04-11 17:21 GMT

ಮಂಗಳೂರು, ಎ.11: ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ತೋಕೂರು ನಿವಾಸಿ ದೀಕ್ಷಿತ್ (24) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಐಪಿಎಲ್ ಕ್ರಿಕೆಟ್ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಈತ ತೋಕೂರು ಬಸ್ ತಂಗುದಾಣ ಸಮೀಪ ೆನ್ ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 4,650 ರೂ. ನಗದು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಣಂಬೂರು ಇನ್‌ಸ್ಪೆಕ್ಟರ್ ಸತ್ಯನಾರಾಯಣ ಕೆ. ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News