×
Ad

ಮಣಿಪಾಲ: ಎ.14ರಂದು ರಾಷ್ಟ್ರೀಯ ಭದ್ರತೆ ಕುರಿತ ವಿಚಾರ ಸಂಕಿರಣ

Update: 2019-04-12 18:12 IST

ಉಡುಪಿ, ಎ.12: ದೇಶಭಕ್ತರ ವೇದಿಕೆ ಉಡುಪಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಹಿತಾಸಕ್ತಿಯ ವಿಶೇಷ ದೃಷ್ಟಿಯಿಂದ ಜಿಲ್ಲೆಯ ನಾಗರಿಕರಿಗಾಗಿ ‘ರಾಷ್ಟ್ರೀಯ ಭದ್ರತೆ’ ವಿಷಯದ ಕುರಿತು ವಿಚಾರ ಸಂಕಿರಣವನ್ನು ಎ.14ರ ರವಿವಾರ ಮಣಿಪಾಲದಲ್ಲಿ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಚಾಲಕ ಮಹೇಶ್ ಠಾಕೂರ್ ತಿಳಿಸಿದ್ದಾರೆ.

‘ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾಗರಿಕರ ಪಾತ್ರ’ ಪರಿಕಲ್ಪನೆಯಲ್ಲಿ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಉದ್ಯಮಿ ರಾಜೀವ್ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಿವೃತ್ತ ಸೇನಾಧಿಕಾರಿ ಮೇಜರ್ ಸುರೇಂದ್ರ ಪೂನಿಯಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಳಿಕ ಸಂವಾದ ಕಾರ್ಯಕ್ರಮನ್ನು ಏರ್ಪಡಿಸಲಾಗಿದೆ ಎಂದರು.

ಎ.14 ರಂದು ಮಣಿಪಾಲದ ಹೋಟೇಲ್ ಕಂಟ್ರಿ ಇನ್ ಸಭಾಭವನದಲ್ಲಿ ಸಂಜೆ 4 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಹೇಶ್ ಠಾಕೂರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News