×
Ad

ಅಂಬಲಪಾಡಿ ಬೇಸಿಗೆ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Update: 2019-04-12 18:14 IST

ಉಡುಪಿ, ಎ.12: ಅಂಬಲಪಾಡಿ ಶ್ರೀಲಕ್ಷ್ಮಿಜನಾರ್ದನ ಯಕ್ಷಗಾನ ಕಲಾಮಂಡಳಿ ಆಯೋಜಿಸಿರುವ ಯಕ್ಷಗಾನ ತರಬೇತಿ ಶಿಬಿರ ಗುರುವಾರ ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಳದ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ ಜ್ಯೋತಿ ಬೆಳಗಿಸಿ ಶಿಬಿರ ಉದ್ಘಾಟಿಸಿದರು. ಯಕ್ಷಗಾನ ಕುಣಿತ ಆರೋಗ್ಯವರ್ಧನೆಗೆ ಕಾರಣ ವಾಗುತ್ತದೆ ಎಂದವರು ಅಭಿಪ್ರಾಯಪಟ್ಟರು. ಉದ್ಯಮಿ ಯು. ವಿಶ್ವನಾಥ ಶೆಣೈ ಮತ್ತು ಚಂದ್ರಶೇಖರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆ.ಜೆ. ಗಣೇಶ್, ಎಸ್. ವಿ. ಭಟ್ ಮತ್ತು ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು. ಉಪಾಧ್ಯಕ್ಷ ಕೆ. ಅಜಿತ್‌ಕುಮಾರ್ ವಂದಿಸಿ, ಖಜಾಂಚಿ ನಟರಾಜ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

ಆಸಕ್ತರಿಗೆ ಉಚಿತವಾಗಿ ನೀಡಲಾಗುತ್ತಿರುವ ಈ ಶಿಬಿರ ಪ್ರತಿದಿನ ಬೆಳಗ್ಗೆ 9 ರಿಂದ 11:30ರವರೆಗೆ ನಡೆಯಲಿದೆ. ಶಿಬಿರದಲ್ಲಿ 60 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಕೆ. ಜೆ. ಕೃಷ್ಣ ನಿರ್ದೇನದಲ್ಲಿ ಶಿಬಿರ ಸಂಪನ್ನಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News