ಭೌತಶಾಸ್ತ್ರ ಸಂಶೋಧನಾ ವಿದ್ಯಾರ್ಥಿನಿ ಅಕ್ಷತಾಗೆ ಪಿಎಚ್ ಡಿ ಪದವಿ

Update: 2019-04-12 12:49 GMT

ಮಣಿಪಾಲ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ಭೌತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಅಕ್ಷತಾ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಇವರು ಎಂಐಟಿಯ ಭೌತಶಾಸ್ತ್ರ ವಿಭಾಗದ ಡಾ. ಸುಧಾ ಡಿ.ಕಾಮತ್ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದರು. ಅಕ್ಷತಾ ಅವರು ಮಾಹೆಯ ಕಾಮರ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಘವೇಂದ್ರ ನಾಯಕ್ ಇವರ ಪತ್ನಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News