×
Ad

ಕುಂದಾಪುರ: ಎ.14ರಂದು ಸಾಮಾಜಿಕ ಸಮಾನತಾ ಸಮಾವೇಶ

Update: 2019-04-12 18:27 IST

ಉಡುಪಿ, ಎ.12: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ವತಿಯಿಂದ ಸಂವಿಧಾನಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128ನೆ ಜನ್ಮ ದಿನಾಚರಣೆಯ ಪ್ರಯುಕ್ತ ಸಾಮಾಜಿಕ ಸಮಾನತಾ ಸಮಾವೇಶವನ್ನು ಎ.14ರಂದು ಬೆಳಗ್ಗೆ 9:30ಕ್ಕೆ ಕುಂದಾಪುರ ಶಾಸ್ತ್ರಿ ಸರ್ಕಲ್‌ನಲ್ಲಿ ಆಯೋಜಿಸಲಾಗಿದೆ

ಸಮಾವೇಶವನ್ನು ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎಸ್.ನಿರಂಜನ್ ಹೆಗ್ಡೆ ಉದ್ಘಾಟಿಸಲಿರುವರು. ಕುಂದಾಪುರ ಡಿವೈಎಸ್ಪಿ ಪಿ.ಬಿ.ದಿನೇಶ್ ಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿರುವರು. ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಜಯಪ್ರಕಾಶ್ ಶೆಟ್ಟಿ ಮುಖ್ಯ ಭಾಷಣ ಮಾಡಲಿರುವರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News