ಸೋಲುವ ಭೀತಿ ನನಗಿಲ್ಲ: ಶೋಭಾ ಕರಂದ್ಲಾಜೆ

Update: 2019-04-12 15:09 GMT

ಉಡುಪಿ, ಎ.12: ಚುನಾವಣಾ ನಾಮಪತ್ರ ಸಲ್ಲಿಕೆಯಾದ ನಂತರ ನಾನು ವ್ಯಾಪಕವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದೇನೆ. ಮತ್ತೊಮ್ಮೆ ಮೋದಿ ಪ್ರಧಾನಿ ಎಂದು ಅಹೋರಾತ್ರಿ ಪಕ್ಷದ ಗೆಲುವಿಗೆ ಶ್ರಮಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಸಂಘಟನೆ ಬಲದಿಂದ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುವುದಲ್ಲಿ ನನಗೆ ಸಂಶಯವಿಲ್ಲ. ಸೋಲುವ ಭೀತಿ ಇರುವುದು ಮೈತ್ರಿ ಪಕ್ಷದ ಅಭ್ಯರ್ಥಿಗೆ. ಬಿಜೆಪಿಗೆ ಎಂದೂ ಸೋಲು ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯಡ್ಕದಲ್ಲಿ ಸಾರ್ವಜನಿಕ ಚುನಾವಣಾ ಸಭೆಯೊಂದರಲ್ಲಿ ಅವರು ಮಾತನಾಡುತಿದ್ದರು. ಏಳು ಮಂದಿ ಶಾಸಕರು ಹಾಗೂ ಎರಡು ಜಿಲ್ಲೆಗಳ ಅದ್ಯಕ್ಷರುಗಳು,ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸುತಿದ್ದಾರೆ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ ಪಕ್ಷದ ಚಿಹ್ನೆಯನ್ನು ಉಳಿಸಿಕೊಳ್ಳಲು ಸಾದ್ಯವಾಗದ ಕಾಂಗ್ರೆಸಿಗರು ಹತಾಶರಾಗಿದ್ದಾರೆ. ಪ್ರಮೋದ್ ಮಂತ್ರಿಯಾಗಿ, ಉಸ್ತುವಾರಿ ಸಚಿವರಾಗಿ ಉಡುಪಿಯಲ್ಲಿ ತಿರಸ್ಕರಿಸಲ್ಪಟ್ಟು, ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡ ಒಬ್ಬ ದುರ್ಬಲ ಅಭ್ಯಥಿಯಾರ್ಗಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಕುಯಿಲಾಡಿ ಸುರೇಶ್ ನಾಯಕ್, ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಲಾಲಾಜಿ ಮೆಂಡನ್ ಕುತ್ಯಾರು ನವೀನ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಪೂಜಾರಿ, ಉಮೇಶ್ ಶೆಟ್ಟಿ, ಸಂಧ್ಯಾಕಾಮತ್, ಜಯಾನಂದ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News